ರಾಮನಗರ:
ಉಪಚುನಾವಣೆ ಕಾರಣಕ್ಕೆ ಕುತೂಹಲ ಮೂಡುದಿರುವ ಚನ್ನಪಟ್ಟಣದಲ್ಲಿ ಇದೀಗ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಈ ಆರೋಪದಲ್ಲಿ ಸಿಲುಕಿರುವ ಬಿಜೆಪಿ ಮುಖಂಡ ಬಂಧನದ ಭೀತಿಯಿಂದ ತಲೆಮರಸಿಕೊಂಡಿದ್ದಾರೆ.
ರಾಮನಗರ ಗ್ರಾಮಾಂತರ ಮಂಡಳ ಬಿಜೆಪಿ ಅಧ್ಯಕ್ಷ ತೂಬಿನಕೆರೆ ರಾಜು ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಆರೋಪದ ದೂರು ಸಲ್ಲಿಸಿದ್ದಾರೆ ಈ ಹಿನ್ನೆಲೆಯಲ್ಲಿ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ ಗಣೇಶ ಹಬ್ಬದ ಸಲುವಾಗಿ ತವರು ಮನೆಗೆ ಬಂದಿದ್ದರು. ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಸಲುವಾಗಿ ಮೆರವಣಿಗೆ ನಡೆಯುವಾಗ ಮಹಿಳೆ ರಾತ್ರಿ 11.40ರ ಸುಮಾರಿಗೆ ತಾಯಿಯೊಂದಿಗೆ ಮನೆ ಮುಂದೆ ನಿಂತಿದ್ದರು. ತಾಯಿ ಕಾರ್ಯನಿಮಿತ್ತ ಒಳಕ್ಕೆ ಹೋಗಿದ್ದರು. ಮಹಿಳೆ ಒಬ್ಬರೇ ಇದ್ದಿದ್ದನ್ನು ಗಮನಿಸಿ ಅವರತ್ತ ಬಂದಿದ್ದ ಬಿಜೆಪಿ ಮುಖಂಡ ತೂಬಿನಕೆರೆ ರಾಜು, ‘ಯಾವಾಗ ಬಂದೆ ಬೇಬಿ’ ಎಂದು ಕೇಳಿದ ಎಂದು ಮಹಿಳೆ ದೂರಿನಲ್ಲಿಉಲ್ಲೇಖಿಸಿದ್ದಾರೆ.
ನನ್ನ ಹೆಗಲ ಮೇಲೆ ಕೈ ಹಾಕಿ ಎದೆ ಭಾಗವನ್ನು ಮುಟ್ಟುತ್ತಾ, ಕಾಮುಕ ದೃಷ್ಟಿಯಿಂದ ಕೈ ಹಿಡಿದು ಎಳೆದಾಡಿ ಅನುಚಿತವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಮೊಬೈಲ್ ಫೋನ್‌ನಿಂದ ಫೋಟೊ ತೆಗೆದು ತನ್ನ ಸ್ನೇಹಿತರಿಗೆ ಕಳಿಸಿದ್ದ. ಈ ಕುರಿತು ಪ್ರಶ್ನಿಸಿದಾಗ, ‘ನನ್ನ ಮೊಬೈಲ್, ನನ್ನಿಷ್ಟ’ ಎಂದು ರಾಜು ಕೆಟ್ಟದಾಗಿ ಪ್ರತಿಕ್ರಿಯಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.
ರಾಜು ವರ್ತನೆಯಿಂದ ದಿಗ್ಬ್ರಮೆಗೊಂಡು ತಕ್ಷಣ ಒಳಗಿದ್ದ ತನ್ನ ಅಣ್ಣನಿಗೆ ವಿಷಯ ತಿಳಿಸಿದ್ದೇನೆ ಅವರು ಬಂದು ಪ್ರಶ್ನಿಸಿದಾಗ, ರಾಜು ತಬ್ಬಿಬ್ಬುಗೊಂಡಿದ್ದಾನೆ. ನಂತರ, ಕುಟುಂಬದವರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ, ಆತನ ಮೊಬೈಲ್ ಕಿತ್ತಕೊಂಡು ಇಟ್ಟುಕೊಂಡಿದ್ದು, ತನಿಖೆ ಸಂದರ್ಭದಲ್ಲಿ ಹಾಜರುಪಡಿಸುವುದಾಗಿ ಮಹಿಳೆ ದೂರಿನಲ್ಲಿ ಹೇಳಿದ್ದಾರೆ.
ಈ ದೂರು ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ತೂಬಿನಕೆರೆ ರಾಜು ನಾಪತ್ತೆಯಾಗಿದ್ದಾರೆ ಇದರ ಬೆನ್ನಲ್ಲೇ ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರು ರಾಜು ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದಾರೆ.
Previous Articleದೀಪಾವಳಿಗೆ ಸರ್ಕಾರ ಡಮಾರ್.
Next Article ಸಿಎಂ ಹುದ್ದೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ.


1 ಟಿಪ್ಪಣಿ
Registre-se agora no Mostbet e receba um impulso incrГvel para comeГ§ar jogando – https://mostbetpt.pro/mostbet-app/ , Entre agora no Mostbet e comece com 125% a mais + 250 rodadas de presente .