ಬೆಂಗಳೂರು,ಫೆ.20-
ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲ ರಸ್ತೆಗಳಲ್ಲಿ
ಪುಂಡರ ಅಟ್ಟಹಾಸ ಕಂಡು ನಾಗರಿಕರು ಬೆಚ್ಚಿ ಬಿದ್ದಿದ್ದಾರೆ. ಸುಮಾರು 20ರಿಂದ 25ರ ಆಸುಪಾಸಿನಲ್ಲಿರುವ ಯುವಕರುಲಾಂಗ್ ಹಿಡಿದು ಬೈಕ್ ಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ನಡೆಸುತ್ತಿದ್ದಾರೆ
ರಾಮಮೂರ್ತಿನಗರ, ಕೆ.ಆರ್.ಪುರಂ ಫ್ಲೈ ಓವರ್ ಮಾರ್ಗವಾಗಿ ಸಿನಿಮೀಯ ರೀತಿಯಲ್ಲಿ ಸಾಲು ಸಾಲಾಗಿ ಬೈಕ್‌ಗಳಲ್ಲಿ ಲಾಂಗ್ ಹಿಡಿದು, ವಾಹನ ಸವಾರರಿಗೆ ಭಯ ಬೀಳಿಸುತ್ತಿದ್ದಾರೆ. ಪೊಲೀಸರ ಭಯವೇ ಇಲ್ಲದೇ ಹತ್ತಾರು ಮಂದಿ ಪುಂಡರು ಲಾಂಗ್ ಹಿಡಿದುಕೊಂಡು ರಾಜಾರೋಷವಾಗಿ ಬೈಕ್ ಚಲಾಯಿಸುತ್ತಿದ್ದಾರೆ.
ಪುಂಡರ ಗುಂಪೊಂದು ಹವಾ ಮೆಂಟೇನ್ ಮಾಡುವುದಕ್ಕೆ ಭಯಬೀಳಿಸುವಂತೆ ಕೈಯಲ್ಲಿ ಕತ್ತಿ, ಲಾಂಗು, ಡ್ರ್ಯಾಗರ್ ಹಿಡಿದು ಅಟ್ಟಹಾಸ ಮೆರೆಯುತ್ತಿದ್ದಾರೆ. ರಸ್ತೆಯಲ್ಲಿ ಬೆಂಕಿ ಬರುವಂತೆ ಕತ್ತಿ ಹಾಗೂ ಲಾಂಗ್‌ನಿಂದ ಬೀಸುತ್ತಿದ್ದು, ಪುಂಡರ ಹಾವಳಿಗೆ ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ. ಪುಂಡರ ಅಟ್ಟಹಾಸದ ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಹಲವಾರು ಮಂದಿ ನಾಗರಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ
ಈ ಪುಂಡರು ಸಾಗಿ ಬರುವ ದಾರಿಯಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮೆರಾ ಗಳ ದೃಶ್ಯಾವಳಿಗಳನ್ನು ಪಡೆದಿರುವ ಪೊಲೀಸರು ಪುಂಡರ ಬಂಧನಕ್ಕೆ ತೀವ್ರ ಶೋಧ ಕೈಗೊಂಡಿದ್ದಾರೆ