ಬೆಂಗಳೂರು,ಜ.9:
ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದೆಯಾದರೂ
ಮುಂಬರುವ ಬೇಸಿಗೆಯಲ್ಲಿ ವಿದ್ಯುತ್ ಗೆ ಹೆಚ್ಚಿನ ಪ್ರಮಾಣದಲ್ಲಿ ಬೇಡಿಕೆ ಬರಲಿದೆ.
ಕಳೆದ ವರ್ಷದ ಬೇಡಿಕೆ ಮತ್ತು ಈ ವರ್ಷದ ಅಗತ್ಯ ಕುರಿತಂತೆ ಅಂದಾಜು ಮಾಡಲಾಗಿದೆ ಇದರ ಪ್ರಕಾರ
ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು ಮುಂಬರುವ ಬೇಸಿಗೆ ಬೇಕಾಗುವ ವಿದ್ಯುತ್ ಪೂರೈಸಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತಂತೆ ಚರ್ಚೆ ನಡೆಸಿದರು ಹಲವು ಮೂಲಗಳಿಂದ ಬೇಡಿಕೆ ಇರುವಷ್ಟು ವಿದ್ಯುತ್ ಲಭ್ಯವಿರುವಂತೆ ಮಾಡಲಾಗುವುದು ಹೀಗಾಗಿ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದರು ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಸಿಗೆಯಲ್ಲಿ ಅಗತ್ಯವಿರುವ ವಿದ್ಯುತ್ ಪೂರೈಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕೆ ತಕ್ಕಂತೆ ವಿತರಣೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.ಕಳೆದ ಬೇಸಿಗೆಯಲ್ಲಿ 17,000 ಮೆಗಾವ್ಯಾಟ್ ಗರಿಷ್ಠ ಬೇಡಿಕೆ ಬಂದಿತ್ತು. ಅದರಂತೆ ಮುಬರುವ ಬೇಸಿಗೆಯಲ್ಲಿ ಎಷ್ಟು ವಿದ್ಯುತ್ ಬೇಕಾಗಬಹುದು ಎಂಬ ಬಗ್ಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿಕೊಂಡು ಕೆಪಿಟಿಸಿಎಲ್, ಪಿಸಿಕೆಎಲ್ ಮತ್ತು ಎಸ್ ಎಲ್ ಡಿಸಿ ವತಿಯಿಂದ ನಡೆಸಿದ ಸಮೀಕ್ಷೆ ಪ್ರಕಾರ ಗರಿಷ್ಠ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅವಶ್ಯಕತೆ ಬರಬಹುದು ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.ಅದರಂತೆ ಅಗತ್ಯ ವಿದ್ಯುತ್ ಪೂರೈಸಲು ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ ದೀರ್ಘಾವಧಿ ವಿದ್ಯುತ್ ಖರೀದಿ ಒಪ್ಪಂದದ ಮೂಲಕ ಹೆಚ್ಚುವರಿ ಅಗತ್ಯವಿರುವ ವಿದ್ಯುತ್ಅನ್ನು ಕಡಿಮೆ ದರಕ್ಕೆ ಖರೀದಿಸಲು ಅನ್ಯ ರಾಜ್ಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಲೋಡ್ ಶೆಡಿಂಗ್ ಮಾಡುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದರು.ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕೃಷಿ ಪಂಪ್ ಸೆಟ್ ಗಳ ಅಕ್ರಮ- ಸಕ್ರಮ ಯೋಜನೆಯಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಕಳೆದ ಒಂದೂವರೆ ವರ್ಷದಲ್ಲಿ 2.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಇನ್ನುಳಿದ ಪಂಪ್ ಸೆಟ್ ಗಳನ್ನು ಮುಂದಿನ ಒಂದು ವರ್ಷದೊಳಗೆ ಸಕ್ರಮಗೊಳಿಸಲಾಗುವುದು ಎಂದು ತಿಳಿಸಿದರು.ವಿದ್ಯುತ್ ಫೀಡರ್ ಗಳಿಂದ 500 ಮೀಟರ್ ಗಿಂತ ಹೆಚ್ಚು ದೂರದಲ್ಲಿರುವ ಪಂಪ್ ಸೆಟ್ ಗಳನ್ನು ಸೌರೀಕರಣಗೊಳಿಸಲು ಆದ್ಯತೆ ನೀಡಲಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರದ ಸಬ್ಸಿಡಿಯನ್ನು ಶ. 50ಕ್ಕೆ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರಶೇ. 30ರಷ್ಟು ಸಬ್ಸಿಡಿ ನೀಡುತ್ತಿದ್ದು, ರೈತರು ಶೇ. 20ರಷ್ಟು ಮೊತ್ತ ಭರಿಸಿದರೆ ಸಾಕು ಎಂದರು.
ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
Previous Articleಕಾಂಗ್ರೆಸ್ಸಿನಲ್ಲಿ ಶತ್ರು ಸಂಹಾರ ನಡೆಯಲಿದೆಯಾ
Next Article CID ವಿಚಾರಣೆ ಎದುರಿಸಿದ ಸಿ.ಟಿ.ರವಿ