ನವದೆಹಲಿ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಾತೆಗಳ ಹಂಚಿಕೆಯ ಕುರಿತಾದ ಹಲವು ಚರ್ಚೆಗಳು ಮತ್ತು ಬೆಳವಣಿಗೆಗಳಿಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ.
ಸದ್ಯದ ಪರಿಸ್ಥಿತಿಯಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬೇಡ ಎಂದು ಹೇಳಿದ ಹೈಕಮಾಂಡ್ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಮುಗಿದ ನಂತರ ಈ ಬಗ್ಗೆ ಚರ್ಚೆ ಮಾಡಬಹುದಾಗಿದೆ ಎಂದು ಹೇಳಿದರು ಎನ್ನಲಾಗಿದೆ.
ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಸೇರಿದಂತೆ ಕೆಲವು ಮಂತ್ರಿಗಳ ಖಾತೆ ಬದಲಾವಣೆ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ ಮನವಿಯನ್ನು ತಿರಸ್ಕರಿಸಿದ ನಾಯಕರು ಒಂದುವೇಳೆ ಖಾತೆ ಬದಲಾವಣೆ ಮಾಡಿದರೆ ಮುಂಬರುವ ಅದಿವೇಶನದಲ್ಲಿ ಪ್ರತಿಪಕ್ಷಗಳ ಬಾಯಿಗೆ ಆಹಾರವಾಗುತ್ತೀರಾ ತಪ್ಪು ಮಾಡಿದ ಕಾರಣಕ್ಕಾಗಿ ತಿಮ್ಮಾಪುರ ಅವರ ಖಾತೆ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಿದರೆ ಯಾವ ಸ್ಪಷ್ಟನೆ ನೀಡುತ್ತೀರಿ ಎಂದು ಕೇಳಿದರು ಎಂದು ಮೂಲಗಳು ತಿಳಿಸಿವೆ.
ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಉಪ ಚುನಾವಣೆಗೂ ಮುನ್ನ ತಾವು ನಾಗೇಂದ್ರ ಅವರಿಗೆ ಮಂತ್ರಿಮಂಡಲ ಸೇರ್ಪಡೆ ಮಾಡಿಕೊಳ್ಳುವ ಭರವಸೆ ನೀಡಿದ್ದೇನೆ. ಹೀಗಾಗಿ ಅದಕ್ಕೆ ಅವಕಾಶ ನೀಡಬೇಕು ಎಂದು ಕೇಳಿದರೆ ಎನ್ನಲಾಗಿದೆ. ಇದಕ್ಕೆ ಹೈಕಮಾಂಡ್ ಒಪ್ಪಿಗೆ ಸೂಚಿಸಿದ್ದು ಕೇವಲ ನಾಗೇಂದ್ರ ಅವರನ್ನು ಮಾತ್ರ ಮಂತ್ರಿ ಮಂಡಲಕ್ಕೆ ಸೇರ್ಪಡೆ ಮಾಡಿಕೊಂಡು ಈ ಹಿಂದೆ ಅವರು ನಿರ್ವಹಿಸುತ್ತಿದ್ದ ಖಾತೆಗಳನ್ನು ಅವರಿಗೆ ನೀಡಬೇಕು ಉಳಿದಂತೆ ಯಾವುದೇ ಮಂತ್ರಿಯ ಗಾದೆ ಬದಲಾಯಿಸಬಾರದು ಎಂದು ಸಲಹೆ ಮಾಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಹೈಕಮಾಂಡ್ ಮಾಡಿದ ಸಲಹೆಗೆ ಸಮ್ಮತಿ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ತಮ್ಮ ಸಂಪುಟಕ್ಕೆ ಮಾಜಿ ಸಚಿವ ನಾಗೇಂದ್ರ ಅವರನ್ನು ಮರು ಸೇರ್ಪಡೆ ಮಾಡಿಕೊಳ್ಳಲು ತೀರ್ಮಾನ ಎಂದು ಬಹುತೇಕ ಸೋಮವಾರ ಸಂಪುಟ ವಿಸ್ತರಣೆ ಕಾರ್ಯ ನಡೆಯಲಿದೆ ಎಂದು ತಿಳಿದುಬಂದಿದೆ.
Previous Articleಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ನಕಾರ
Next Article ಮಂತ್ರಿ ಜಮೀರ್ ಅಹಮದ್ ಖಾನ್ ಪುತ್ರನ ವಿರುದ್ಧ ಪ್ರಕರಣ.