ಮೈಸೂರು : ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿ ಅಂಗಡಿ ಮುಗ್ಗಟ್ಟನ್ನು ಬಂದ್ ಮಾಡಿದ್ದರಿಂದ ಸಮಸ್ಯೆ ಆರಂಭವಾಯಿತು ಎಂದು ಸಂಸದ ಪ್ರತಾಪ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಮುಸ್ಲಿಮರಲ್ಲೂ ನಮ್ಮ ಡಿಎನ್ ಎ ಯೇ ಇದೆ. ಮುಸ್ಲಿಮರಲ್ಲೂ ನಮ್ಮದೇ ರಕ್ತ ಹರಿಯುತ್ತಿದೆ. ಮುಸ್ಲಿಮರು ಮನಸ್ಥಿತಿ ಬದಲಿಸಿಕೊಳ್ಳಬೇಕು. ಕಲ್ಲು ತೂರುವ ಸಂಸ್ಕೃತಿ ಬಿಡಬೇಕು. ಇಲ್ಲದಿದ್ದರೆ ಕಲ್ಲು ತೂರುವವರ ಬಳಿಗೆ ಬುಲ್ಡೋಜರ್ ಬರಲಿದೆ. ಉತ್ತರ ಪ್ರದೇಶದಲ್ಲಿ ಇರುವಂತೆ ಇಲ್ಲಿಯೂ ಆಗಲಿದೆ ಎಂದರು.