ಬೆಂಗಳೂರು, ಆ.23-
ನಾಡಹಬ್ಬ ವಿಶ್ವ ವಿಖ್ಯಾತ ದಸರಾ ಸಂಭ್ರಮಕ್ಕೆ ಸಾಂಸ್ಕೃತಿಕ ರಾಜಧಾನಿ ಮೈಸೂರು ಸಜ್ಜಾಗುತ್ತಿರುವ ಬೆನ್ನಲ್ಲೇ ಆತಂಕ ಕಾರಿ ವಿದ್ಯಮಾನವೊಂದು ಬೆಳಕಿಗೆ ಬಂದಿದೆ.
ಮೈಸೂರು ನಗರದ ಹೊರವಲಯದಲ್ಲಿನ ತಿ.ನರಸೀಪುರದ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ಸಮೀಪ 10 ಸ್ಫೋಟಕ ವಸ್ತುಗಳು ಪತ್ತೆಯಾಗಿವೆ. ಇದು ಸ್ಥಳೀಯ ನಾಗರಿಕರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
ಸ್ಫೋಟಕ ವಸ್ತುಗಳನ್ನು ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್ ಕವರ್‌ನಲ್ಲಿಟ್ಟು ಹೋಗಿದ್ದಾರೆ. ಸ್ಥಳೀಯರು ಹಾಗೂ ಹೋಟೆಲ್ ಸಿಬ್ಬಂದಿ ಅನುಮಾನಗೊಂಡು ನೋಡಿದಾಗ ಸ್ಫೋಟಕ ವಸ್ತುಗಳು ಎಂದು ತಿಳಿದು ಬಂದಿದೆ.
ಬಳಿಕ ಹೋಟೆಲ್ ಸಿಬ್ಬಂದಿ ಪ್ಲಾಸ್ಟಿಕ್ ಕವರ್ ನ್ನು ಪಕ್ಕದಲ್ಲಿರುವ ಮರಕ್ಕೆ ನೇತು ಹಾಕಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ .ತಕ್ಷಣವೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಜೊತೆ ಧಾವಿಸಿದ ಪೊಲೀಸರು ಸ್ಫೋಟಕಗಳಿದ್ದ ಕವರ್‌ನ್ನು ಪರಿಶೀಲಿಸಿದ್ದಾರೆ.
ಕವರ್ ನಲ್ಲಿ ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕಗಳು ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ. ಸ್ಫೋಟಕ ವಸ್ತುಗಳು ಕಲ್ಲು ಗಣಿಗಾರಿಕೆಗೆ ಹಾಗೂ ನಾಡ ಬಾಂಬ್ ಕಾಡು ಪ್ರಾಣಿಗಳ ಬೇಟೆಗೆ ಬಳಕೆಗೆ ಬಳಸಲಾಗುವ ವಸ್ತುಗಳಂತೆ ಕಂಡುಬಂದಿವೆ.
ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
Previous Articleವಾಹನ ಸವಾರರೇ ಹುಷಾರ್.
Next Article ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಲು ಹೊಸ ವ್ಯವಸ್ಥೆ.


1 ಟಿಪ್ಪಣಿ
Where the house fears the player – https://gampicil.com , The reels are already vibrating with your name .