ಬೆಂಗಳೂರು.
ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಂಭವವಿದೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ ಇದರ ಪರಿಣಾಮ ರಾಜ್ಯದ 10 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯ ತಮಿಳುನಾಡು, ಶ್ರೀಲಂಕಾ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದ ತಮಿಳು ನಾಡಿನಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದ್ದು ತುಂತುರು ಮಳೆ ಯಾಗುತ್ತಿದೆ
ಶುಕ್ರವಾರ, ಶನಿವಾರ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.
ಇದರ ಬೆನ್ನಲ್ಲೇ ಡಿ.16ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ವಾಯುಭಾರ ಕುಸಿತದ ತೀವ್ರತೆ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ. ಡಿ.17-18ಕ್ಕೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Previous Articleಶಿವರಾಜ್ ಕುಮಾರ್ ಡಿ.18ಕ್ಕೆ ಅಮೇರಿಕಾ ಯಾತ್ರೆ.
Next Article ಯುಐ ಸಿನಿಮಾ ಮೂಡಿಸಿದ ಕ್ರೇಜ್.