ನವದೆಹಲಿ.
ಕೊಲೆ ಪ್ರಕರಣದಲ್ಲಿ ವ್ಯಕ್ತಿಯೊಬ್ಬ 34 ವರ್ಷಗಳಿಂದ
ಜೈಲು ಪಾಲಾಗಿದ್ದಾರೆ ಆತನಿಗೆ ಈಗ ಬರೋಬ್ಬರಿ104 ವರ್ಷ. ಸುದೀರ್ಘ ಅವಧಿಯಿಂದ ಜೈಲಿನಲ್ಲಿರುವ ಈ ಶತಾಯುಷಿಗೆ ಈಗ ವಯೋ ಸಹಜ ಕಾರಣ ಮತ್ತು ಅನಾರೋಗ್ಯದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪಶ್ಚಿಮ ಬಂಗಾಳದ ರಸಿಕ ಚಂದ್ರ ಮಂಡಲ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರ ಪೀಠ
ಜಾಮೀನು ಮಂಜೂರು ಮಾಡಿದೆ.
ನ್ಯಾಯಪೀಠ ತನ್ನ ಆದೇಶದಲ್ಲಿ, ‘ರಿಟ್ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ವಿಚಾರಣಾ ನ್ಯಾಯಾಲಯದ ನಿಯಮಗಳು ಮತ್ತು ಷರತ್ತುಗಳನ್ನು ಗಮನದಲ್ಲಿಟ್ಟುಕೊಂಡು ಅರ್ಜಿದಾರ ರಸಿಕ ಚಂದ್ರ ಮಂಡಲ್‌ಗೆ ಮಧ್ಯಂತರ ಜಾಮೀನು ನೀಡಬಹುದಾಗಿದೆ ಎಂದು ಹೇಳಿ
ಪಶ್ಚಿಮ ಬಂಗಾಳದ ರಸಿಕ ಚಂದ್ರ ಮಂಡಲ್ 1988ರ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿದ್ದರು. ತನಿಖೆಯ ನಂತರ ಕೋರ್ಟಿನಲ್ಲಿ ಅವರ ವಿರುದ್ಧದ ಆರೋಪ ಸಾಬೀತಾಗಿ 1994ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದರು. ಅವರನ್ನು ಪೊಲೀಸರು ಬಂಧಿಸಿ ಸೆರೆಮನೆಗೆ ಕಳುಹಿಸಿದರು. ಆಗ ಅವರಿಗೆ 68 ವರ್ಷ ವಯಸ್ಸಾಗಿತ್ತು.
ಈ ಶಿಕ್ಷೆಯ ವಿರುದ್ಧ ಅವರು ಕಲ್ಕತ್ತಾ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. 2018ರಲ್ಲಿ ಈಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಇದಾದ ನಂತರ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಇಲ್ಲಿಯೂ ಅವರಿಗೆ ನಿರಾಸೆಯಾಗಿದೆ.
ಕೊನೆಗೆ ರಸಿಕ ಚಂದ್ರ ಮಂಡಲ್ ಅವರು ತಮಗೆ 99 ವರ್ಷದವರಾಗಿದ್ದಾಗ 2020 ರಲ್ಲಿ ಮತ್ತೊಮ್ಮೆ ಸುಪ್ರೀಂ ಕೋರ್ಟ್‌ಗೆ ಹೊಸ ಮನವಿ ಸಲ್ಲಿಸಿದರು. ವೃದ್ಧಾಪ್ಯ ಮತ್ತು ಅನಾರೋಗ್ಯದ ಕಾರಣ ನೀಡಿ, ಶಿಕ್ಷೆಯ ಅವಧಿಗೂ ಮೊದಲೇ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಅದರ ವಿಚಾರಣೆ ಇನ್ನೂ ಬಾಕಿ ಇದೆ. ಇದರ ನಡುವೆ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಅದನ್ನು ಕೋರ್ಟ್ ಮಾನ್ಯ ಮಾಡಿದೆ.
Previous Articleಕೇಸರಿಮಯವಾದ ಚಿಕ್ಕಮಗಳೂರು.
Next Article ಗುರಪ್ಪ ನಾಯ್ಡುಗೆ ಕೆಪಿಸಿಸಿ ಗೇಟ್ ಪಾಸ್.