ಬೆಂಗಳೂರು, ಸೆ.4:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪದ ಸುಳಿಗೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನ ತ್ಯಜಿಸಲಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಡೆ ಕುತೂಹಲ ಮೂಡಿಸಿದೆ.
ಈ ಹಿಂದೆ ರಾಜ್ಯದಲ್ಲಿ ಮೂರು ಉಪ ಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿ ಮಾಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಏರಿದ್ದ ಅವರು ಇದೀಗ ಬದಲಾದ ಪರಿಸ್ಥಿತಿಯಲ್ಲಿ ರಾಜ್ಯ ರಾಜಕಾರಣದ ಕೇಂದ್ರಬಿಂದು ಆಗಲು ಹೊರಟಿದ್ದಾರೆ.
ಇತ್ತೀಚೆಗಷ್ಟೇ ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಸತೀಶ್ ಜಾರಕಿಹೊಳಿ ಅವರು ಇದೀಗ ದೆಹಲಿಗೆ ತೆರಳಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಗಡ್ಕರಿ ಅವರ ಭೇಟಿಯ ನಂತರ ಜಾರಕಿಹೊಳಿ ಅವರು ಕಾಂಗ್ರೆಸ್ ಕಚೇರಿಗೆ ತೆರಳಿ ಪಕ್ಷದ ಹಿರಿಯ ನಾಯಕರು ಜೊತೆ ಸಮಾಲೋಚನೆ ನಡೆಸಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಅವರು ಗೃಹ ಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ಕೆಲವು ಶಾಸಕರ ಜೊತೆ ಮಾತುಕತೆ ನಡೆಸಿದರು ಈ ವೇಳೆಯಲ್ಲಿ ರಾಜಕೀಯವಾಗಿ ಹಲವಾರು ವಿಷಯಗಳನ್ನು ಚರ್ಚಿಸಲಾಗಿದೆ ಅವುಗಳನ್ನು ಮಾಧ್ಯಮಗಳಿಗೆ ತಿಳಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಆಚ್ಚರಿ ಮೂಡಿಸಿದ್ದರು.
ಇದೀಗ ದೆಹಲಿಯಲ್ಲಿ ಸಚಿವ ಗಡ್ಕರಿ ಸೇರಿದಂತೆ ಕೆಲ ಬಿಜೆಪಿ ನಾಯಕನ ಜೊತೆ ಮಾತುಕತೆ ನಡೆಸಿದ್ದಾರೆ ಇದಾದ ಬಳಿಕ ಬೆಂಗಳೂರಿಗೆ ಆಗಮಿಸಿದ ಅವರು ತಮ್ಮ ಆಪ್ತರ ಜೊತೆ ಸಮಾಲೋಚನೆ ನಡೆಸಿದ್ದು ಯಾವುದೇ ವಿಷಯಗಳ ಬಗ್ಗೆ ಮಾಹಿತಿ ನೀಡುತ್ತಿಲ್ಲ ಒಟ್ಟಾರೆ ಜಾರಕಿಹೊಳಿ ಅವರ ರಾಜಕೀಯ ನಡೆ ಕುತೂಹಲ ಮೂಡಿಸಿದೆ.
ಬೆಂಬಲ ಘೋಷಣೆ:
ಇದರ ಬೆನ್ನಲ್ಲೇ ಮಾಜಿ ಸಚಿವ ಹಾಗೂ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಅವರು ರಾಜ್ಯದ ಮುಖ್ಯಮಂತ್ರಿ ಆಗಲು ಎಲ್ಲ ರೀತಿಯ ಅರ್ಹತೆ ಹೊಂದಿದ್ದಾರೆ ಅವರು ರಾಜ್ಯದ ಮುಖ್ಯಮಂತ್ರಿ ಆಗಲು ತನ್ನ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ.
Previous Articleಕನ್ನಡ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ.?
Next Article ಕನ್ನಡ ಚಿತ್ರರಂಗದಲ್ಲಿ ಪುರುಷರೂ ಸೇಫ್ ಅಲ್ಲ.