Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಮಾನತೆಯತ್ತ‌ ದಾಪುಗಾಲಿಟ್ಟ ಬಜೆಟ್
    Viral

    ಸಮಾನತೆಯತ್ತ‌ ದಾಪುಗಾಲಿಟ್ಟ ಬಜೆಟ್

    vartha chakraBy vartha chakraಮಾರ್ಚ್ 7, 202524 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.7:
    ಸಾಮಾಜಿಕ ನ್ಯಾಯ, ಸಮಾನತೆ, ಭ್ರಾತೃತ್ವದ ತಳಹದಿಯ ಮೇಲೆ ಸಮಗ್ರ ಕರ್ನಾಟಕದ ಅಭಿವೃದ್ಧಿಯ ಕನಸು ಕಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 4,09,549 ಲಕ್ಷ ಕೋಟಿ ರೂಪಾಯಿ ಗಾತ್ರದ ತಮ್ಮ ದಾಖಲೆಯ 16ನೇ ಬಜೆಟ್ ಅನ್ನು ರಾಜ್ಯ ವಿಧಾನ ಮಂಡಲದಲ್ಲಿ ಮಂಡಿಸಿದ್ದಾರೆ.
    ಗ್ಯಾರಂಟಿ ಯೋಜನೆಗಳ ಜೊತೆಗೆ ಇತರ ಜನಪರ ಕಾರ್ಯಕ್ರಮಗಳಿಗೂ ನಮ್ಮ ಸರ್ಕಾರ ಒತ್ತು ನೀಡಿದೆ. ದುರ್ಬಲ ವರ್ಗದವರಿಗೆ ನೀಡುತ್ತಿರುವ ಸವಲತ್ತುಗಳನ್ನು ಇನ್ನಷ್ಟು ಬಲಪಡಿಸುವ ಗುರಿ ಹೊಂದಿದ್ದೇವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಮಹಿಳೆಯರು, ರೈತರು, ಶ್ರಮಿಕರು ಸೇರಿದಂತೆ ವಿವಿಧ ವರ್ಗಗಳ ಅಭ್ಯುದಯಕ್ಕೆ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಿದೆ‌ ಎಂದು ಘೋಷಿಸಿದರು .
    ಜನ ಕಲ್ಯಾಣ ಯೋಜನೆಗಳ ಜೊತೆಗೆ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವ ಒತ್ತಡಕ್ಕೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಪನ್ಮೂಲ ಕ್ರೂಢೀಕರಣಕ್ಕೆ ಹಲವಾರು ಹೊಸ ಕಾಸರತ್ತುಗಳನ್ನು ಮಾಡಲು ಮುಂದಾಗಿದ್ದಾರೆ ಜೊತೆಗೆ ಈ ಬಾರಿ 1,16,000 ಕೋಟಿ ರೂಪಾಯಿ ಸಾಲ ಮಾಡುವುದಾಗಿ ಪ್ರಸ್ತಾಪಿಸಿದ್ದಾರೆ.
    ವೃತ್ತಿ ತೆರಿಗೆಯನ್ನು 200 ರೂ. ರಿಂದ 300 ರೂ.ಗೆ ವೃತ್ತಿ ತೆರಿಗೆ ಏರಿಕೆ ಮಾಡಲಾಗಿದೆ. ಇದಲ್ಲದೆ ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಮೂಲಸೌಕರ್ಯ ಅಭಿವೃದ್ಧಿ ಹೊಸ ಕಾರ್ಯಕ್ರಮ ಜಾರಿ ಮಾಡಲಾಗಿದ್ದು, ಈ ಯೋಜನೆಯಡಿ ರಾಜ್ಯದ ಎಲ್ಲಾ ವಿಧಾನಸಭೆ ಕ್ಷೇತ್ರದ ರಸ್ತೆ, ಸಣ್ಣ ನೀರಾವರಿ, ಮೂಲ ಸೌಕರ್ಯಗಳಿಗೆ 8 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಘೋಷಿಸಿದ್ದಾರೆ.
    ಶಿಕ್ಷಣ ಇಲಾಖೆಗೆ 45,286 ಕೋಟಿ ರೂಪಾಯಿ‌ ಅನುದಾನ ಹಂಚಿಕೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,955 ಕೋ.ಇಂಧನ ಇಲಾಖೆಗೆ 26,896 ಕೋ.ಗ್ರಾಮೀಣಾಭಿವೃದ್ಧಿ ಇಲಾಖೆ – 26,735 ಕೋಟಿ ರೂಪಾಯಿ ನೀಡಿದ್ದಾರೆ
    ನೀರಾವರಿಗೆ – 22181 ಕೋಟಿ ರೂಪಾಯಿ
    ನಗರಾಭಿವೃದ್ಧಿ ಮತ್ತು ವಸತಿ ಇಲಾಖೆ – 21,405 ಕೋ.ಒಳಾಡಳಿತ ಮತ್ತು ಸಾರಿಗೆ ಇಲಾಖೆ – 20,625 ಕೋಟಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,473 ಕೋಟಿ, ಕಂದಾಯ ಇಲಾಖೆಗೆ 17,201 ಕೋ.ಸಮಾಜ ಕಲ್ಯಾಣ ಇಲಾಖೆಗೆ 16,955 ಕೋಟಿ,ಲೋಕೋಪಯೋಗಿ ಇಲಾಖೆಗೆ 11,841 ಕೋ., ಆಹಾರ ಇಲಾಖೆಗೆ 8,275 ಕೋ.,ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 7,145 ಕೋಟಿ ಮತ್ತು
    ಪಶು ಸಂಗೋಪನೆ, ಮೀನುಗಾರಿಕೆ ಇಲಾಖೆಗೆ 3,977 ಕೋಟಿ ರೂಪಾಯಿ ಬಜೆಟ್ ಗಾತ್ರ ನಿಗದಿ ಮಾಡಲಾಗಿದೆ.
    ಕೃಷಿ ಮತ್ತು ಇನ್ನಿತರೆ ಆಸ್ತಿಗಳ ದಾಖಲೀಕರಣ, ಮೂಲಸೌಲಭ್ಯ ಒದಗಿಸುವಿಕೆ, ಸಮರ್ಪಕ ವಿದ್ಯುತ್‌ ಪೂರೈಕೆ, ಗೋದಾಮುಗಳ ಒದಗಿಸುವಿಕೆ ಮುಂತಾದ ಚಟುವಟಿಕೆಗಳ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಹಾಗೂ ಗ್ರಾಮೀಣ ಜನರ ಆದಾಯ ಹೆಚ್ಚಿಸಲು ಶ್ರಮಿಸಲಾಗುವುದು ಎಂದು ಹೇಳಿದರು
    ರಾಜ್ಯದ ಆಮೂಲಾಗ್ರ ಆರ್ಥಿಕ ಬೆಳವಣಿಗೆ ಹೆಚ್ಚಿಸುವಲ್ಲಿ ಮೂಲಸೌಕರ್ಯ ಕ್ಷೇತ್ರದ ನಿರ್ಣಾಯಕ ಪಾತ್ರವನ್ನು ಗುರುತಿಸಿ, ಈ ಬಾರಿ ಬಂಡವಾಳದ ಮೇಲಿನ ವೆಚ್ಚಗಳಿಗೆ ಗಣನೀಯವಾದ ಅನುದಾನ ಒದಗಿಸಿದೆ. ಬಂಡವಾಳ ಲೆಕ್ಕದಲ್ಲಿ ಶೇ. 47.3 ರಷ್ಟು ಹೆಚ್ಚಳವಾಗಿರುವುದು ಅಭಿವೃದ್ಧಿ ಕೇಂದ್ರಿತ ಆಯವ್ಯಯ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿರುವ ಅವರು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಹೂಡಿಕೆಯು ಸ್ವಸ್ಥ ಸಮಾಜದ ನಿರ್ಮಾಣಕ್ಕೆ ದಾರಿಯಾಗಲಿದೆ ಎಂಬ ಆಶಾವಾದ ಪ್ರಕಟಿಸಿದ್ದಾರೆ.
    ಆಡಳಿತದಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಹಾಗೂ ಭ್ರಷ್ಟಾಚಾರವನ್ನು ನಿಗ್ರಹಿಸಲು ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುತ್ತಿದ್ದು
    ಗ್ಯಾರಂಟಿ ಯೋಜನೆಗಳಿಗಾಗಿ 51,034 ಕೋಟಿ ರೂ. ಮೀಸಲಿಟ್ಟದ್ದು ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ ಎಂಬ ಹೊಸ ಯೋಜನೆ ಪ್ರಕಟಿಸಿದರು
    ಈ ಯೋಜನೆಯ ಮೂಲಕ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು 8,000 ಕೋಟಿ‌ ನೀಡಲಾಗುವುದು ಎಂದು ಹೇಳಿದರು
    ಅತಿಹೆಚ್ಚು ಉದ್ಯೋಗ ಸೃಜನೆಯಾಗುವ ಎಂ.ಎಸ್.ಎಂ.ಇ, ಪ್ರವಾಸೋದ್ಯಮ, ಐಟಿಬಿಟಿ ವಲಯಗಳಲ್ಲಿ ಹೊಸ ನೀತಿ ಜಾರಿಗೆ ತರುವುದಾಗಿ ಪ್ರಕಟಿಸಿದ ಅವರು ನಾಗರೀಕ ಸೇವಾ ಪೂರೈಕೆ ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸಿ, ಕೌನ್ಸೆಲಿಂಗ್‌ ಮುಖಾಂತರ ವರ್ಗಾವಣೆ ಮಾಡುವ ಮೂಲಕ ಈ ವಲಯದಲ್ಲಿ ಭ್ರಷ್ಟಾಚಾರವನ್ನು ಕಡಿಮೆ ಮಾಡಿ ಪಾರದರ್ಶಕತೆ ಕಾಯ್ದುಕೊಳ್ಳುವುದಾಗಿ ತಿಳಿಸಿದರು
    ಪ್ರಾದೇಶಿಕ ಅಸಮಾನತೆಯ ನಿವಾರಣೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆ, ಸಾರಿಗೆಯ ಸುಗಮ ವ್ಯವಸ್ಥೆ, ಕಾನೂನು ಮತ್ತು ಸುವ್ಯವಸ್ಥೆ ನಿಭಾವಣೆಗೆ ಹೊಸ ಕಾರ್ಯತಂತ್ರಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದ್ದು,ರೈತರ ಕಲ್ಯಾಣ ಉದ್ದೇಶಿತ ಯೋಜನೆಗಳಿಗೆ ವಿವಿಧ ಇಲಾಖೆಗಳಿಗೆ ಒಟ್ಟು 51,339 ಕೋಟಿ ಅನುದಾನ ನೀಡುವುದಾಗಿ ತಿಳಿಸಿದರು .
    ಆಯವ್ಯಯ ಗಾತ್ರ 4,09,549 ಕೋಟಿ.
    ಒಟ್ಟು ಸ್ವೀಕೃತಿ- 4,08,647 ಕೋ.
    ರಾಜಸ್ವ ಸ್ವೀಕೃತಿ -2,92, 477 ಕೋ.
    ಸಾರ್ವಜನಿಕ ಋಣ-1,16,000 ಕೋ.
    ಬಂಡವಾಳ ಸ್ವೀಕೃತಿ -1,16,170 ಕೋ.
    ಒಟ್ಟು ವೆಚ್ಚ- 4,09,549 ಕೋಟಿ.
    ರಾಜಸ್ವ ವೆಚ್ಚ-3,11,739 ಕೋ.
    ಬಂಡವಾಳ ವೆಚ್ಚ-71,336 ಕೋ.
    ಸಾಲ ಮರುಪಾವತಿ- 26,474 ಕೋ.
    ಎಸ್‌.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ.ಅನುದಾನ 42,018 ಕೋಟಿ.
    ಎಸ್‌.ಸಿ.ಎಸ್.ಪಿ. ಅನುದಾನ -29,992 ಕೋ, ಹಾಗೂ ಟಿ.ಎಸ್.ಪಿ. ಅಡಿ 12,026 ಕೋಟಿ.
    ಮಹಿಳಾ ಆಯವ್ಯಯದಲ್ಲಿ ಒದಗಿಸಿದ ಅನುದಾನ 94,084 ಕೋಟಿ.ಮಕ್ಕಳ ಆಯವ್ಯಯದಲ್ಲಿ ಒದಗಿಸಿದ ಅನುದಾನ- 62,033 ಕೋಟಿ.
    ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ 800 ಕೋಟಿ ವೆಚ್ಚದಲ್ಲಿ ಮುಖ್ಯಮಂತ್ರಿ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ,ಗೃಹಲಕ್ಷ್ಮಿ ಯೋಜನೆಗೆ
    28,608 ಕೋಟಿ ಅನುದಾನ ನೀಡಲಾಗಿದೆ.
    ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 1,000 ಹಾಗೂ ಸಹಾಯಕಿಯರ ಗೌರವಧನವನ್ನು750 ಹೆಚ್ಚಳ ಮಾಡಲಾಗಿದೆ.

    ಆರೋಗ್ಯ ಕರ್ನಾಟಕ ಕಾನೂನು ತಂತ್ರಜ್ಞಾನ ನ್ಯಾಯ ಬೆಂಗಳೂರು ಶಿಕ್ಷಣ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    Next Article ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • melbet ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • law firm services ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • ElliottAlods ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe