ಮೈಸೂರು, ಜ.7 :
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿಚಾರದಲ್ಲಿ ತಾವು ಯಾವುದೇ ನಿಯಮ ಉಲ್ಲಂಘನೆ ಮಾಡಿಲ್ಲ.ಹೀಗಾಗಿ ತಮಗೆ ಈ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುತ್ತಾರೆ ಎಂಬ
ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಳೆದ 2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ನನ್ನ ಪತ್ನಿ, ನಮ್ಮ ಜಮೀನನ್ನು ಅಕ್ರಮವಾಗಿ ಮುಡಾ ಸ್ವಾಧೀನಪಡಿಸಿಕೊಂಡಿದೆ.ಈ ಹಿನ್ನೆಲೆಯಲ್ಲಿ ಬದಲಿ ನಿವೇಶನ ನೀಡುವಂತೆ ಕೋರಿ ಅರ್ಜಿ ಅವರು ಸಲ್ಲಿಸಿದ್ದರು.ಆದರೆ, ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ ಎಂದು ವಿವರಿಸಿದರು.
ಇದಾದ ನಂತರ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರ ತಮ್ಮ ಪತ್ನಿಯ ಮನವಿ ಕಾನೂನು ಪ್ರಕಾರವಾಗಿದೆ ಎಂಬ ಹಿನ್ನೆಲೆಯಲ್ಲಿ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಈ ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ತಾವು ಯಾವುದೇ ರೀತಿಯ ಪ್ರಭಾವವನ್ನು ಬೀರಿಲ್ಲ
ಎಂದು ಸ್ಪಷ್ಟಪಡಿಸಿದರು.
ಹೀಗಾಗಿ ಇಡೀ ಪ್ರಕ್ರಿಯೆಯು ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ.ಹೀಗಾಗಿ ತಮ್ಮ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅವಕಾಶ ನೀಡಿವುದಿಲ್ಲ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು
ವಾಗ್ದಾಳಿ:
ಆದರೆ, ಬಿಜೆಪಿ ಮತ್ತು ಜೆಡಿಎಸ್ ತಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಸುಳ್ಳು ಆಪಾದನೆಗಳನ್ನು ಮಾಡುತ್ತಿವೆ.ಸರ್ಕಾರ ಅಸ್ತಿರಗೊಳಿಸಲು ಆಪರೇಶನ್ ಕಮಲ ನಡೆಸಲು ಪ್ರಯತ್ನಿಸಿದರೂ, ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ ಎಂದು ದೂರಿದರು.
ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ .ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿಯವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ ಎಂದು ಹೇಳಿದರು
ನಿವೃತ್ತರಾಗಲಿ:
ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಯುಡಿಯೂರಪ್ಪ ಅವರು ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್ ಹಾಕಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು ಎಂದು ಕಿಡಿಕಾರಿದರು
ಯಡಿಯೂರಪ್ಪಬಅವರ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳು ಇದ್ದು, ಈ ಕುರಿತು ಸದ್ಯದಲ್ಲೇ ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ.
ಅವರ ಅಧಿಕಾರದ ಅವಧಿಯಲ್ಲಿ ಚೆಕ್ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
Previous Articleಎಚ್ಚರಿಕೆ ನಡೆ ಇಡುತ್ತಿರುವ ರಾಜ್ಯಪಾಲರು.
Next Article ಪಾದಯಾತ್ರೆಯಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಹೊಡೆದಾಟ.

1 ಟಿಪ್ಪಣಿ
Det bedste online casino er Betano https://betanogame.org/da/. Lås op for 100% op til €500 plus gratis spins og nyd non-stop action. Hurtige udbetalinger, kæmpe turneringer og endeløs sjov venter på dig.