ಬೆಳಗಾವಿ :
ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ನಿಂದನೆ ಮಾತುಗಳಿಂದ ತುಂಬಾ ನೊಂದಿದ್ದೇನೆ. ಇದನ್ನು
ಇಲ್ಲಿಗೆ ಬಿಡುವೂದಿಲ್ಲ ಸಿ.ಟಿ.ರವಿ ವಿರುದ್ಧ ಕಾನೂನು ಸಮರ ಮುಂದುವರಿಸುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆ ಮಾತಿನಿಂದ ನನಗೆ ಬಹಳಷ್ಟು ನೋವಾಗಿತ್ತು. ಹೀಗಾಗಿ ಕಳೆದ ಎರಡು ದಿನ ಮೌನಕ್ಕೆ ಶರಣಾಗಿದ್ದೆ. ಕಳೆದ 26 ವರ್ಷಗಳಿಂದ ಸಂಘರ್ಷದಿಂದ ಮೇಲೆ ಬಂದಿದ್ದೇನೆ. ನಾನೇನು ರೆಡ್ ಕಾರ್ಪೆಟ್ ಮೇಲೆ ಬಂದಿಲ್ಲ ಎಂದರು.
ಘಟನೆ ಬಳಿಕ ಸಿ.ಟಿ.ರವಿ ಹಾರ ತುರಾಯಿ ಹಾಕಿಸಿಕೊಂಡು ವೈಭವಿಕರಿಸಿಕೊಳ್ಳುತ್ತಿದ್ದಾರೆ.
ಅವರಿಗೆ ಅಪರಾಧಿ ಭಾವನೆ ಕಾಡುತ್ತಿಲ್ಲ. ನಾನು ಮತ್ತೆ ಸಭಾಪತಿ ಅವರಿಗೆ ದೂರು ಕೊಡುತ್ತೇನೆ. ಸಿ.ಟಿ. ರವಿ ವಿರುದ್ಧ ಹೋರಾಟ ಮುಂದುವರಿಸುವೆ. ಪೊಲೀಸ್ ತನಿಖೆ ಬೇಗ ಆಗಬೇಕು. ಎಫ್ ಎಸ್ ಎಲ್ ವರದಿ ಬೇಗ ಬಹಿರಂಗವಾಗಬೇಕು ಎಂದು ಹೇಳಿದರು
ಮಹಿಳೆಯರನ್ನು ಗೌರವಿಸುವುದು ನಮ್ಮ ಪಕ್ಷದ ಮೂಲತತ್ವ ಎನ್ನುವ ಬಿಜೆಪಿಯವರು ಮಹಿಳೆಯನ್ನು ಅಪಮಾನಿಸಿದ ಸಿ.ಟಿ ರವಿ ಬೆನ್ನಿಗೆ ನಿಂತಿದ್ದಾರೆ ಎಂದು ಕಿಡಿ ಕಾರಿದರು.
ಸಿ.ಟಿ.ರವಿ ಅವರಿಗೆ ಏನಾಗಿದೆ ಗಾಯ, ಎಷ್ಟಾಗಿದೆ ಗಾಯ. ಪೊಲೀಸರು ಎನ್ ಕೌಂಟರ್ ಮಾಡುತ್ತಿದ್ದರು, ಅಂತಾರಲ್ಲಾ, ನಾಚಿಕೆ ಆಗಲ್ವ ನಿಮಗೆ. ಇಡೀ ಕರ್ನಾಟಕದ ಜನತೆ ನಿಮಗೆ ಛೀಮಾರಿ ಹಾಕುತ್ತಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಏನು ಮಾಡಬೇಕು ಅದನ್ನು ಮಾಡಿದ್ದಾರೆ. ಪ್ರಕರಣದ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಸಿ.ಟಿ.ರವಿ ವಿರುದ್ಧ ಪ್ರಧಾನಿ, ರಾಷ್ಟ್ರಪತಿಗೂ ಪತ್ರ ಬರೆಯುತ್ತೇನೆ, ಸಾಧ್ಯವಾದರೆ ಭೇಟಿ ಯಾಗುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಇದೇ ವೇಳೆ ಸಿಟಿ ರವಿ ಅವರು ತಮ್ಮನ್ನು ಕುರಿತು ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ವಿಡಿಯೋವನ್ನು ಬಿಡುಗಡೆ ಮಾಡಿದರು.
Previous Articleಹೊಸ ವರ್ಷದ ಸಂಭ್ರಮಕ್ಕೆ ಕಿಡಿಗೇಡಿಗಳ ಕೆಂಗಣ್ಣು.
Next Article ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.