Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ಗೆ ದೇವನೂರು ಮಹಾದೇವ ಪತ್ರ
    ಸುದ್ದಿ

    ಸಿಎಂ ಗೆ ದೇವನೂರು ಮಹಾದೇವ ಪತ್ರ

    vartha chakraBy vartha chakraಆಗಷ್ಟ್ 14, 2025Updated:ಆಗಷ್ಟ್ 14, 2025ಯಾವುದೇ ಟಿಪ್ಪಣಿಗಳಿಲ್ಲ3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಾನ್ಯ ಮುಖ್ಯಮಂತ್ರಿಗಳೇ–

    ನಾನು ಗೊಂದಲ, ಆತಂಕಗಳ ನಡುವೆ ತಮಗೆ ಈ ಪತ್ರ ಬರೆಯುತ್ತಿರುವೆ. ಒಳಮೀಸಲಾತಿ ವರದಿ ವಿವಾದಕ್ಕೊಳಗಾಗಿ, ಎಲ್ಲಿ ಮುಂದೂಡಲ್ಪಡುತ್ತದೊ ಎಂಬುದು ನನ್ನನ್ನು ತುಂಬಾ ಕಾಡುತ್ತಿದೆ. ಜೊತೆಗೆ, ಖಾಲಿ ಇರುವ ಉದ್ಯೋಗಗಳಿಗೂ ನೇಮಕಾತಿ ಇಲ್ಲದೆ ಏಗುತ್ತಿರುವ ತರುಣರು, ತಮ್ಮ ತಾರುಣ್ಯ ಕಳೆದುಕೊಂಡು ಮಧ್ಯ ವಯಸ್ಕರಾಗುತ್ತಿದ್ದಾರೆ. ಇದು ತುಂಬಾನೆ ದಯನೀಯ ಪರಿಸ್ಥಿತಿ.
    ಇಂತಹ ಪರಿಸ್ಥಿತಿಯಲ್ಲಿ ನನಗೆ ತೋರುತ್ತಿರುವ ಪರಿಹಾರ ಇದು. ಒಂದು, ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಠಾನ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕು. ಇದರ ಜೊತೆಗೇನೆ, ಇಂದು ದಲಿತ ಸಮುದಾಯವೂ ದಿನದಿನಕ್ಕೂ ಚಲನಶೀಲತೆ ಪಡೆದುಕೊಂಡು ಬದಲಾವಣೆಯಾಗುತ್ತಿರುವುದರಿಂದ ಅದಕ್ಕೆ ತಕ್ಕಂತೆ ಮೀಸಲಾತಿ ಪ್ರಾತಿನಿಧ್ಯವನ್ನು ಸಮತೋಲನ ಮಾಡುವುದಕ್ಕಾಗಿ ಹಾಗೂ ಕಾಲಕಾಲಕ್ಕೆ ಹೊಸ ದತ್ತಾಂಶಗಳಿಂದ ಒಳ ಮೀಸಲಾತಿಯ ಪ್ರಮಾಣವನ್ನು ಪರಿಷ್ಕರಿಸಲು, ಹಿಂದುಳಿದ ವರ್ಗಗಳಿಗೆ ಇರುವಂತೆಯೇ, ಪರಿಶಿಷ್ಟ ಜಾತಿಗಳ ಆಯೋಗಕ್ಕೂ ಅಧಿಕಾರ ಮತ್ತು ಕಾರ್ಯವ್ಯಾಪ್ತಿಯನ್ನು ಒದಗಿಸಬೇಕು ಎಂಬುದು ನನ್ನ ಭಾವನೆ. ಈ ರೀತಿಯಾದರೆ ಆ ಆಯೋಗದ ಮುಂದೆ, ಜಸ್ಟೀಸ್ ನಾಗಮೋಹನ್ ದಾಸ್ ಅವರ ವರದಿಯ ಬಗ್ಗೆ ಇರಬಹುದಾದ ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಲು ಹಾಗೂ ಪರಿಹಾರ ಕಂಡುಕೊಳ್ಳಲು ಸಾಧ್ಯತೆ ಹೆಚ್ಚುತ್ತದೆ.
    ಈ ಹಿಂದೆ, ಮೀಸಲಾತಿ ಹೆಚ್ಚಳ ಆಯೋಗದ ಅಧ್ಯಕ್ಷರಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರು ಸಲ್ಲಿಸಿದ ವರದಿಯಲ್ಲಿ ‘ಪರಿಶಿಷ್ಟ ಜಾತಿ ಸಮುದಾಯವು 17.98%, ಪರಿಶಿಷ್ಟ ಪಂಗಡವು 7.41% ಜನಸಂಖ್ಯೆ ಇರುವುದರಿಂದ ಎಸ್‌ಸಿಗೆ 18% ಹಾಗೂ ಎಸ್‌ಟಿಗೆ 7.50% ನೀಡುವುದು ಸೂಕ್ತ’ ಎಂದಿದ್ದರು. (ಆದರೆ, ಅಂದು ಆ ಆಯೋಗದ ಮುಂದೆ 17%ಗೆ ಏರಿಸುವ ವಿಚಾರವಷ್ಟೇ ಇದ್ದುದರಿಂದ, ಶಿಫಾರಸ್ಸು ಅಷ್ಟಕ್ಕೆ ಸೀಮಿತವಾಗಿತ್ತು). ತಾವು 1% ಹೆಚ್ಚಳದ ನಿರ್ಧಾರ ಕೈಗೊಂಡರೆ ಹೆಚ್ಚುವರಿಯಾಗಿ ಸಿಗುವ 1% ನಿಂದ ಇಂದಿನ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದಾದ ಸಾಧ್ಯತೆ ಇದೆ. ಇದು ಸರ್ಕಾರದ ಕೈಯಲ್ಲೇ ಇದೆ ಎಂದುಕೊಂಡಿದ್ದೇನೆ. ನೀವು ಈ ಕುರಿತು ಆಶ್ವಾಸನೆ ನೀಡಿದರೂ ದಲಿತ ಸಮುದಾಯ ನಂಬುತ್ತದೆ.
    ಜಸ್ಟಿಸ್‌ ದಾಸ್ ಆಯೋಗವು ಒಳಮೀಸಲಾತಿ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿ ಆಧರಿಸಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ದಲಿತ ಸಮುದಾಯ ಹೋರಾಟ ನಡೆಸುತ್ತಿದೆ. ವರದಿಯಲ್ಲಿ ಕೆಲವು ಲೋಪಗಳಿವೆ ಎಂದು ಆಕ್ಷೇಪಣೆಗಳೂ ವ್ಯಕ್ತವಾಗುತ್ತಿವೆ. ಇದು, ಚರ್ಚೆಗೂ ಕಾರಣವಾಗಿದೆ. ಆಕ್ಷೇಪಗಳ ಕಾರಣಕ್ಕೆ ಒಳಮೀಸಲಾತಿ ಜಾರಿಯನ್ನು ಸರ್ಕಾರ ಮುಂದೂಡುವ ಆತಂಕವೂ ಇದೆ. ಈ ಆತಂಕ, ಚರ್ಚೆಗಳಿಗೆ ಪರಿಹಾರ ಸೂಚಿಸಿ ಮತ್ತು
    ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಹಿರಿಯ ಸಾಹಿತಿ ದೇವನೂರ ಮಹಾದೇವ ಬಹಿರಂಗ ಪತ್ರ ಬರೆದಿದ್ದಾರೆ…
    ಮಾನ್ಯ ಮುಖ್ಯಮಂತ್ರಿಗಳೇ– ನಾನು ಗೊಂದಲ, ಆತಂಕಗಳ ನಡುವೆ ತಮಗೆ ಈ ಪತ್ರ ಬರೆಯುತ್ತಿರುವೆ. ಒಳಮೀಸಲಾತಿ ವರದಿ ವಿವಾದಕ್ಕೊಳಗಾಗಿ, ಎಲ್ಲಿ ಮುಂದೂಡಲ್ಪಡುತ್ತದೊ ಎಂಬುದು ನನ್ನನ್ನು ತುಂಬಾ ಕಾಡುತ್ತಿದೆ. ಜೊತೆಗೆ, ಖಾಲಿ ಇರುವ ಉದ್ಯೋಗಗಳಿಗೂ ನೇಮಕಾತಿ ಇಲ್ಲದೆ ಏಗುತ್ತಿರುವ ತರುಣರು, ತಮ್ಮ ತಾರುಣ್ಯ ಕಳೆದುಕೊಂಡು ಮಧ್ಯ ವಯಸ್ಕರಾಗುತ್ತಿದ್ದಾರೆ. ಇದು ತುಂಬಾನೆ ದಯನೀಯ ಪರಿಸ್ಥಿತಿ.
    ಇಂತಹ ಪರಿಸ್ಥಿತಿಯಲ್ಲಿ ನನಗೆ ತೋರುತ್ತಿರುವ ಪರಿಹಾರ ಇದು. ಒಂದು, ಜಸ್ಟೀಸ್ ನಾಗಮೋಹನ್‌ ದಾಸ್ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಠಾನ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಳ್ಳಬೇಕು. ಇದರ ಜೊತೆಗೇನೆ, ಇಂದು ದಲಿತ ಸಮುದಾಯವೂ ದಿನದಿನಕ್ಕೂ ಚಲನಶೀಲತೆ ಪಡೆದುಕೊಂಡು ಬದಲಾವಣೆಯಾಗುತ್ತಿರುವುದರಿಂದ ಅದಕ್ಕೆ ತಕ್ಕಂತೆ ಮೀಸಲಾತಿ ಪ್ರಾತಿನಿಧ್ಯವನ್ನು ಸಮತೋಲನ ಮಾಡುವುದಕ್ಕಾಗಿ ಹಾಗೂ ಕಾಲಕಾಲಕ್ಕೆ ಹೊಸ ದತ್ತಾಂಶಗಳಿಂದ ಒಳ ಮೀಸಲಾತಿಯ ಪ್ರಮಾಣವನ್ನು ಪರಿಷ್ಕರಿಸಲು, ಹಿಂದುಳಿದ ವರ್ಗಗಳಿಗೆ ಇರುವಂತೆಯೇ, ಪರಿಶಿಷ್ಟ ಜಾತಿಗಳ ಆಯೋಗಕ್ಕೂ ಅಧಿಕಾರ ಮತ್ತು ಕಾರ್ಯವ್ಯಾಪ್ತಿಯನ್ನು ಒದಗಿಸಬೇಕು ಎಂಬುದು ನನ್ನ ಭಾವನೆ. ಈ ರೀತಿಯಾದರೆ ಆ ಆಯೋಗದ ಮುಂದೆ, ಜಸ್ಟೀಸ್ ನಾಗಮೋಹನ್ ದಾಸ್ ಅವರ ವರದಿಯ ಬಗ್ಗೆ ಇರಬಹುದಾದ ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಲು ಹಾಗೂ ಪರಿಹಾರ ಕಂಡುಕೊಳ್ಳಲು ಸಾಧ್ಯತೆ ಹೆಚ್ಚುತ್ತದೆ.
    ಈ ಹಿಂದೆ, ಮೀಸಲಾತಿ ಹೆಚ್ಚಳ ಆಯೋಗದ ಅಧ್ಯಕ್ಷರಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರು ಸಲ್ಲಿಸಿದ ವರದಿಯಲ್ಲಿ ‘ಪರಿಶಿಷ್ಟ ಜಾತಿ ಸಮುದಾಯವು 17.98%, ಪರಿಶಿಷ್ಟ ಪಂಗಡವು 7.41% ಜನಸಂಖ್ಯೆ ಇರುವುದರಿಂದ ಎಸ್‌ಸಿಗೆ 18% ಹಾಗೂ ಎಸ್‌ಟಿಗೆ 7.50% ನೀಡುವುದು ಸೂಕ್ತ’ ಎಂದಿದ್ದರು. (ಆದರೆ, ಅಂದು ಆ ಆಯೋಗದ ಮುಂದೆ 17%ಗೆ ಏರಿಸುವ ವಿಚಾರವಷ್ಟೇ ಇದ್ದುದರಿಂದ, ಶಿಫಾರಸ್ಸು ಅಷ್ಟಕ್ಕೆ ಸೀಮಿತವಾಗಿತ್ತು). ತಾವು 1% ಹೆಚ್ಚಳದ ನಿರ್ಧಾರ ಕೈಗೊಂಡರೆ ಹೆಚ್ಚುವರಿಯಾಗಿ ಸಿಗುವ 1% ನಿಂದ ಇಂದಿನ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದಾದ ಸಾಧ್ಯತೆ ಇದೆ. ಇದು ಸರ್ಕಾರದ ಕೈಯಲ್ಲೇ ಇದೆ ಎಂದುಕೊಂಡಿದ್ದೇನೆ. ನೀವು ಈ ಕುರಿತು ಆಶ್ವಾಸನೆ ನೀಡಿದರೂ ದಲಿತ ಸಮುದಾಯ ನಂಬುತ್ತದೆ.
    01-08-2024ರ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಪರಿಶಿಷ್ಟ ಜಾತಿಗಳು ವೈವಿಧ್ಯಮಯ ಭಿನ್ನರೂಪತೆಯ (Heterogeneous) ಗುಂಪುಗಳಾಗಿವೆ ಎಂದು ಅಭಿಪ್ರಾಯ ನೀಡಿದೆ. ವರ್ಗೀಕರಣ ನಿರ್ಧರಿಸುವಾಗ ಸರ್ವಾಂಗೀಣ ಹಿಂದುಳಿದಿರುವಿಕೆಯನ್ನೂ ಪರಿಗಣಿಸಿ ನಿರ್ಧರಿಸಬೇಕಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಜಸ್ಟೀಸ್ ನಾಗಮೋಹನ್ ದಾಸ್‌ರವರ ವರದಿಯನ್ನು ಗಮನಿಸಿದರೆ ಅದು ಸುಪ್ರೀಂ ಕೋರ್ಟ್ ಆಶಯಕ್ಕೆ ತಕ್ಕಂತೆಯೇ ಇರುವಂತೆ ಕಾಣಿಸುತ್ತದೆ.
    ಇದಲ್ಲದೆ, ಜಸ್ಟೀಸ್ ನಾಗಮೋಹನ್‌ ದಾಸ್ ವರದಿಯು ಸಮಗ್ರ ಸಮೀಕ್ಷೆ ಮಾಡುವ ಮೂಲಕವೇ ಅಂಕಿ-ಅಂಶಗಳನ್ನು ಸಂಗ್ರಹಿಸಿದೆ. ವಿಸ್ತಾರವಾದ ಸಮೀಕ್ಷೆ ಮಾಡಿ 94% ರಷ್ಟು ಜನರ ಮಾಹಿತಿ ಸಂಗ್ರಹಿಸಿದೆ. ಮನೆ ಮನೆ ಸರ್ವೆ, ನಿಗಧಿತ ಕೇಂದ್ರಗಳಲ್ಲಿ ಸರ್ವೆ, Online ಸರ್ವೆ ಅವಕಾಶ ಹೀಗೆ ಸಮಗ್ರ ಪ್ರಯತ್ನ ಮಾಡಿದೆ. ಈ ರೀತಿ ಸಮೀಕ್ಷೆ ಅಪರೂಪ. ಮೊದಲು ಇದನ್ನು ಎಲ್ಲರೂ ಗೌರವಿಸಬೇಕಾಗಿದೆ. ಹಾಗೆಂದು ಈಗ ಎದ್ದಿರುವ ಆಕ್ಷೇಪಣೆಗಳನ್ನು ತಳ್ಳಿ ಹಾಕಬೇಕಿಲ್ಲ. ಅವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶಾಶ್ವತ ಆಯೋಗಕ್ಕೆ ಹೆಚ್ಚಿನ ಅಧಿಕಾರ ಮತ್ತು ಕಾರ್ಯವ್ಯಾಪ್ತಿಯನ್ನು ತಾವು ಘೋಷಣೆ ಮಾಡುವುದಾದರೆ, ಅದು ಮುಂದಿನ ದಿನಗಳಲ್ಲಿ ಕಾಲಕಾಲಕ್ಕೆ ಲಭ್ಯವಾಗುವ ಜಾತಿ/ಜನಗಣತಿಯ ದತ್ತಾಂಶಗಳ ಮೂಲಕ ಪರಿಷ್ಕರಣೆಯ ಮೂಲಕ ಸಮತೋಲನ ಮಾಡಲು ಅವಕಾಶವಾಗುತ್ತದೆ.
    ಕೊನೆಯದಾಗಿ, 1) ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು 18% ಮತ್ತು 7.5% ಮಾಡುವ ಬಗ್ಗೆ ಆಶ್ವಾಸನೆ ನೀಡುವುದು. 2) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಶಾಶ್ವತ ಆಯೋಗಕ್ಕೆ ಹೆಚ್ಚಿನ ಕಾರ್ಯವ್ಯಾಪ್ತಿ ಹಾಗೂ ಅಧಿಕಾರದ ಘೋಷಣೆ ಮಾಡುವುದು. 3) ಮೀಸಲಾತಿಯನ್ನು ನೀಡದಿರುವುದಕ್ಕಾಗಿಯೇ ಹುಟ್ಟಿಕೊಂಡಿದೆಯೇನೋ ಎಂಬಂತಿರುವ ‘ಗುತ್ತಿಗೆ ಕೆಲಸ’ಗಳಲ್ಲೂ ಮೀಸಲಾತಿ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳುವುದು. ಅಷ್ಟೇ ಅಲ್ಲದೇ, 4) ಪರಿಶಿಷ್ಟ ಜಾತಿ/ಪಂಗಡಗಳ ಹೆಸರಿನಲ್ಲಿ ಸುಳ್ಳು ಪ್ರಮಾಣ ಪತ್ರ ಪಡೆದುಕೊಂಡಿರುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಅಗತ್ಯವಿರುವ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ನಿರ್ಧಾರ ಪ್ರಕಟಿಸುವುದು. ಇಂತಹ ನಿಲುವುಗಳು ಜಸ್ಟೀಸ್ ನಾಗಮೋಹನ್‌ ದಾಸ್ ವರದಿಯನ್ನು ತಕ್ಷಣವೇ ಅನುಷ್ಠಾನ ಮಾಡಲು ಪೂರಕ ವಾತಾವರಣ ಉಂಟು ಮಾಡಬಹುದು ಎಂದು ಭಾವಿಸುತ್ತೇನೆ.

    ದೇವನೂರು ಮಹಾದೇವ

    Verbattle
    Verbattle
    Verbattle
    g ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಗೆ ದೇವನೂರು ಮಹಾದೇವ ಪತ್ರ
    Next Article ದರ್ಶನ್ ಕೈದಿ ನಂಬರ್ 7,314.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mukpmq ರಲ್ಲಿ BJP ಪರ ಅಲೆ‌ ಸೃಷ್ಟಿಗೆ‌ Nadda, Shah ಕಾರ್ಯತಂತ್ರ
    • Tzuydn ರಲ್ಲಿ ಜೈಲಿನಲ್ಲೇ ಕೊಲೆಯಾದ ಪಾತಕಿ.
    • Gttbgn ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.