ಧಾರವಾಡ.
ರಾಜ್ಯದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದಲ್ಲಿ ಸಿಲುಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ನಿರಾಳಾರಾಗಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮೇಲೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬೀರಿ ತಮ್ಮ ಪತ್ನಿ ಬಿಎಮ್ ಪಾರ್ವತಿ ಅವರಿಗೆ ಪರ್ಯಾಯ ನಿವೇಶನ ದೊರಕಿಸಿ ಕೊಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು.
ಇದೊಂದು ಬಹುಕೋಟಿ ಕರ್ಮಕಾಂಡವಾಗಿದೆ ಎಂದು ಆರೋಪ ಕೇಳಿ ಬಂದ ಬೆನ್ನೆಲ್ಲೇ, ರಾಜ್ಯ ಸರ್ಕಾರ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು.
ಆದರೆ ಇದಕ್ಕೆ ತಕರಾರು ಸಲ್ಲಿಸಿದ್ದ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವವರು ಹಗರಣ ಆರೋಪದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸುವಂತೆ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು
ಸ್ನೇಹ ಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆಯನ್ನು 2025ರ ಜನವರಿ 27ರಂದು ಪೂರ್ಣಗೊಳಿಸಿ, ಕಾಯ್ದಿರಿಸಿರುವ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಶುಕ್ರವಾರ ಪ್ರಕಟಿಸಿತು.
ಆರೋಪದ ಬಗ್ಗೆ ಈಗಾಗಲೇ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಜೊತೆಗೆ ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ಎಂದು ಹೇಳಿದ ನ್ಯಾಯ ಪೀಠ ಸ್ನೇಹ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು.
ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಮಣೀಂದ್ರ್ ಸಿಂಗ್, ರಾಜ್ಯ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಸಿದ್ದರಾಮಯ್ಯ ಪತ್ನಿ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು.