ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಅವರಿಗೆ 500 ಕೋಟಿ ಕಿಕ್ ಬ್ಯಾಕ್
    ರಾಜಕೀಯ

    ಸಿದ್ದರಾಮಯ್ಯ ಅವರಿಗೆ 500 ಕೋಟಿ ಕಿಕ್ ಬ್ಯಾಕ್

    vartha chakraBy vartha chakraಏಪ್ರಿಲ್ 9, 20252 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.9:
    ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರ್ಣಗೊಳಿಸುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ‌ ವಿರುದ್ಧ ಗಂಭೀರ ಸ್ವರೂಪದ ಆರೋಪವೊಂದು ಕೇಳಿ ಬಂದಿದೆ.
    ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ರಾಮ್‌ಗಢ್‌ ಮಿನರಲ್ಸ್ ಸೇರಿದಂತೆ 8 ಗಣಿ ಗುತ್ತಿಗೆಗಳ ನವೀಕರಣಕ್ಕೆ ಅವರು 500 ಕೋಟಿ ಕಿಕ್‌ಬ್ಯಾಕ್‌ ಪಡೆದಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
    ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬುವರು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಗೆ ದೂರು ಸಲ್ಲಿಸಿ,ವಿಚಾರಣೆಗೆ ಅನುಮತಿ ನೀಡಬೇಕೆಂದು ಕೋರಿದ್ದಾರೆ.
    ರಾಮಗಢ್‌ ಮಿನರಲ್ಸ್ ಸೇರಿದಂತೆ ಒಟ್ಟು 8 ಗಣಿ ಗುತ್ತಿಗೆಗಳ ನವೀಕರಣಕ್ಕೆ ಅಧಿಕಾರ ದುರುಪಯೋಗಪಡಿಸಿಕೊಂಡು ಸಿದ್ದರಾಮಯ್ಯ ಅವರು 500 ಕೋಟಿ ಕಿಕ್‌ಬ್ಯಾಕ್‌ ಪಡೆದಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ 5 ಸಾವಿರ ಕೋಟಿಗೂ ಹೆಚ್ಚು ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.
    ಈ ಹಿಂದೆ 2014-15ರ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು 8 ಗಣಿ ಗುತ್ತಿಗೆಗಳಿಗೆ ತಾರ್ಕಿಕವಾಗಿ ನವೀಕರಣ ನೀಡಿದ್ದ ಅನುಮೋದನೆ ಹಾಗೂ ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಿರುವ ಅಫಿಡೆವಿಟ್‌ನಲ್ಲಿ ಸಿದ್ದರಾಮಯ್ಯ ಆಸ್ತಿ ಏರಿಕೆಯಾಗಿರುವುದರ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.
    ಗಣಿ ಗುತ್ತಿಗೆ ನವೀಕರಣಕ್ಕೂ ಮುನ್ನ ಸಿದ್ದರಾಮಯ್ಯನವರ ಆದಾಯದಲ್ಲಿ ಏರಿಕೆಯಾಗಿರಲಿಲ್ಲ. 2023ರ ವಿಧಾನಸಭೆ ಚುನಾವಣೆ ವೇಳೆ ಅವರ ಕುಟುಂಬದ ಸದಸ್ಯರ ಸ್ಥಿರ-ಚರಾಸ್ತಿಗಳಲ್ಲೂ ಏರಿಕೆಯಾಗಿದೆ. ಏಕಾಏಕಿ ಆದಾಯ ಹೆಚ್ಚಳವಾಗಿರುವುದಕ್ಕೆ ಕಿಕ್‌ಬ್ಯಾಕ್‌ ಕಾರಣ. ಹೀಗಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕೆಂದು ಕೋರಿದ್ದಾರೆ.
    ಎಂಎಂಡಿಆರ್‌ ಕಾಯ್ದೆಯ ಸೆಕ್ಷನ್‌ 10ಎ 10ಎ(2)(ಬಿ), ಸೆಕ್ಷನ್‌ 10 ಎ(2)(ಸಿ) ಕಾಯ್ದೆ 2015ರ ಪ್ರಕಾರ ಗಣಿಯನ್ನು ಹರಾಜು ಹಾಕಬೇಕೆ ಹೊರತು ನವೀಕರಣ ಮಾಡಲು ಅವಕಾಶವಿಲ್ಲ ಎಂಬುದನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
    ಗಣಿಯನ್ನು ಹರಾಜು ಹಾಕಿದ್ದರೆ ಒಂದು ಗಣಿಯಿಂದ 500 ಕೋಟಿ ಆದಾಯ ಸರ್ಕಾರಕ್ಕೆ ಬರುತ್ತಿತ್ತು. ಒಟ್ಟು 8 ಗಣಿ ಕಂಪನಿಗಳನ್ನು ನವೀಕರಣ ಮಾಡಿದ್ದರಿಂದ 4 ಸಾವಿರ ಕೋಟಿ ಬೊಕ್ಕಸಕ್ಕೆ ನಷ್ಟವಾಗಿದೆ. ಅದೇ ರೀತಿ ಹರಾಜು ಪ್ರಕ್ರಿಯೆ ನಡೆದಿದ್ದರೆ ರಾಜಧನ ರೂಪದಲ್ಲಿ 600 ಕೋಟಿ ಸಂಗ್ರಹವಾಗುತ್ತಿತ್ತು. ಇಲ್ಲಿ ಮುಖ್ಯಮಂತ್ರಿಗಳೇ 500 ಕೋಟಿ ಕಿಕ್‌ಬ್ಯಾಕ್‌ ಪಡೆದಿರುವುದರಿಂದ ಬೊಕ್ಕಸಕ್ಕೆ ಹೊಡೆತ ಬಿದ್ದಿದೆ ಎಂದು ಹೇಳಿದ್ದಾರೆ.
    ತುಮಕೂರು ಮಿನರಲ್ಸ್ 161.86 ಎಕರೆ , ಎಸ್ಕೋ 46.55 2 ರಾಮ್‌ಗಢ್‌ (ಡಾಲ್ಕಿಯ) 828.6 ಎಕರೆ, ಕರ್ನಾಟಕ ಲಿಂಸ್ಕೋ 40.47 ಎಕರೆ, ಕೆಂಎಂಎಂಐ (ಕಾರಿಗನೂರು ಮಿನರಲ್ಸ್ ) 498.57 ಎಕರೆ, (ಬಿಬಿಎಚ್‌) 259.52 ಎಕರೆ, ಎಂ ಉಪೇಂದ್ರನ್‌ ಮೈನ್ಸ್ 112.3 ಎಕರೆ, ಜಯರಾಮ್‌ ಮಿನರಲ್ಸ್ ಗೆ 29.35 ಎಕರೆ ಗಣಿ ಗುತ್ತಿಗೆ ನವೀಕರಿಸಲಾಗಿದೆ.
    ಈ ಎಂಟುಗಣಿ ಗುತ್ತಿಗೆಗಳಿಗೆ ನವೀಕರಣಕ್ಕೆ ತಾತ್ವಿಕ ಅನುಮೋದನೆ ಅಗತ್ಯವೇ ಇರಲಿಲ್ಲ. ಗಣಿ ಗುತ್ತಿಗೆ ನವೀಕರಣ ಪ್ರಕ್ರಿಯೆಗಳಿಗೆ ಸಂಬಂಧಿಸಿದಂತೆ ಕಂಪನಿಗಳು ಸಕ್ಷಮ ಪ್ರಾಧಿಕಾರಗಳಾದ ಅರಣ್ಯ ಇಲಾಖೆ ಮತ್ತು ಐಬಿಎಂಗೆ ಮನವಿ ನೀಡಬೇಕಿತ್ತು.
    ಕಬ್ಬಿಣದ ಅದಿರಿನ ಗಣಿಗಳನ್ನು ಹರಾಜಿನ ಮೂಲಕ ಹಂಚಿಕೆ ಮಾಡಬೇಕು ಎಂದು ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್‌ ಹೇಳಿತ್ತು. ಕೇಂದ್ರ ಸರ್ಕಾರವು ಸುಗ್ರೀವಾಜ್ಞೆ ಮೂಲಕ ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆಗೆ ಜನವರಿ 12ರಂದು ತಿದ್ದುಪಡಿ ತಂದಿತ್ತು. ಗಣಿ ಗುತ್ತಿಗೆ ನವೀಕರಣಕ್ಕೆ ಸಂಬಂಧಿಸಿದಂತೆ ಸಮಿತಿಯ ಉನ್ನತಾಧಿಕಾರ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಇದನ್ನು ಉಲ್ಲಂಘಿಸಿ 2,386 ಎಕರೆ ಭೂಮಿಯನ್ನು ಈ ಕಂಪನಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ
    ಈ ಗಂಭೀರ ಸ್ವರೂಪದ ಆರೋಪಗಳ ಹಿನ್ನೆಲೆಯಲ್ಲಿ
    ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಕಾಯ್ದೆ 1998ರ ಕಾಯ್ದೆ ಸೆಕ್ಷನ್‌ 7, 9, 11, 12 ಮತ್ತು 15 ಹಾಗೂ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 59, 61, 42, 201, 227, 228, 229, 239, 314, 316/3, 318/1, 319, 322, 324/2, 324(3), 335, 336, 338 ಹಾಗೂ 340ರಡಿ ವಿಚಾರಣೆಗೆ ಪೂರ್ವಾನುಮತಿ ನೀಡಬೇಕೆಂದು ಕೋರಿದ್ದಾರೆ.
    ಈ ಸಂಬಂಧ ದೂರುದಾರರ ಜೊತೆ ರಾಜ್ಯಪಾಲರು ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಆ ನಂತರ ದೂರಿನ ಮೇಲೆ ಸಹಿ ಮಾಡಿ ಕಾನೂನು ವಿಭಾಗದ ಅಭಿಪ್ರಾಯಕ್ಕೆ ಕಳುಹಿಸಿದ್ದಾರೆ. ಸಾಲಿಸಿಟರ್‌ ಜನರಲ್‌ ಬಳಿ ಚರ್ಚೆ ನಡೆಸಿ ತೀರ್ಮಾನ ಮಾಡುವುದಾಗಿ ರಾಜ್ಯಪಾಲರು ದೂರುದಾರರಿಗೆ ಭರವಸೆ ನೀಡಿದ್ದಾರೆ

    Verbattle
    Verbattle
    Verbattle
    ಕರ್ನಾಟಕ ಕಾನೂನು ಚುನಾವಣೆ ತುಮಕೂರು ನ್ಯಾಯ ಬೆಂಗಳೂರು ಮೈ ರಾಜ್ಯಪಾಲ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಾಟಲಿ ನೀರು ಸುರಕ್ಷಿತವಲ್ಲ
    Next Article ಹೊಸ ವಿಮಾನ ನಿಲ್ದಾಣಕ್ಕೆ ತಕರಾರು
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    2 ಪ್ರತಿಕ್ರಿಯೆಗಳು

    1. Vqajqq on ಮಾರ್ಚ್ 21, 2026 8:57 ಫೂರ್ವಾಹ್ನ

      Mostbet – o cassino online que mais recompensa seus jogadores em 2025 – Cashback 10% , No Mostbet vocГЄ comeГ§a forte e joga com ainda mais confianГ§a .

      Reply
    2. Uincjq on ಮಾರ್ಚ್ 24, 2026 12:36 ಅಪರಾಹ್ನ

      Unleash the thrill — your next big win is just one spin away – https://gntopama.com/mostbet-kazino-2026-125-bonus-250-fs/ , Where every spin feels electric and every win feels legendary .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • SteveRhymn ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Edwardcem ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • MichaelEnalt ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.