ಬೆಂಗಳೂರು, ಜು.30:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾನೂನಿನ ಕುಣಿಕೆಯೊಳಗೆ ಸಿಲುಕಿಸಲು ದೊಡ್ಡ ಮಟ್ಟದಲ್ಲಿ ಪ್ರಯತ್ನ ಆರಂಭವಾಗಿದೆ.
ಸಿದ್ದರಾಮಯ್ಯ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ತಮ್ಮ ಕುಟುಂಬ ಸದಸ್ಯರಿಗೆ ಹೆಚ್ಚುವರಿ ನಿವೇಶನ ಕೊಡಿಸಿದ್ದಾರೆ ಎಂದು ಆರೋಪಿಸಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಹಲವು ದಾಖಲೆಗಳನ್ನು ರಾಜ್ಯಪಾಲರಿಗೆ ನೀಡಿದ್ದು ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ ಕೋರಿದ್ದಾರೆ.
ಈ ಮನವಿಯನ್ನು ಪರಿಶೀಲಿಸಿರುವ ರಾಜ್ಯಪಾಲರು ತನಿಖೆಗೆ ಅನುಮತಿ ನೀಡುವ ಸಂಬಂಧ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಒಂದು ವೇಳೆ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡಿದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.
ಕೇಂದ್ರದ ಸಂಚು:
ಈ ನಡುವೆ,ಕೇಂದ್ರವು ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಖಂಡಿಸಿ ಹೋರಾಟ ಮಾಡುತ್ತಿರುವ ಹಿನ್ನಲೆಯಲ್ಲಿ ರಾಜ್ಯಪಾಲರನ್ನು ಬಳಸಿಕೊಂಡು ರಾಜ್ಯ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು.
ರಾಜ್ಯದ ಜನರ ಆಶೀರ್ವಾದ ಹಾಗೂ ಸಂವಿಧಾನದ ರಕ್ಷಣೆ ಇರುವುದರಿಂದ ಏನು ಆಗುವುದಿಲ್ಲ ಎಂದರು.
ವಾಮಮಾರ್ಗದ ಮೂಲಕ ಸರ್ಕಾರ ಉರುಳಿಸಲು ಸಾಧ್ಯವಾಗುವದಿಲ್ಲ. ಕಾನೂನು, ಜನರ ನಡುವೆ ಹೋಗಿ ಕೇಂದ್ರದ ವಿರುದ್ಧ ಹೋರಾಟ ಮುಂದುವರಿಸಲಿದ್ದೇವೆ ಎಂದರು.
ರಾಜ್ಯದಲ್ಲಿ ಜನರು ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿರುವುದರಿಂದ ಕ್ಷೇತ್ರಗಳ ಪುನರ್ ವಿಂಗಡಣೆ ಮೂಲಕ ಸಂಸದರ ಸ್ಥಾನಗಳನ್ನು ಕಡಿಮೆ ಮಾಡಲು ಬಿಜೆಪಿ ಮುಂದಾಗಿದೆ ಎಂದು ಆರೋಪಿಸಿದರು.
Previous Articleರಾಜ್ಯದ ಈ ವಿಷಯ ರಾಹುಲ್ ಗಾಂಧಿಗೆ ಬೇಸರ ತರಿಸಿದೆ.
Next Article ಮಾರಿಷಸ್ ನ 10 ಸಾವಿರ ಕೋಟಿ ಯಾರದ್ದು.?