ಬೆಂಗಳೂರು, ಜೂ. 29:
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಠಾಧೀಶರು ನೀಡುತ್ತಿರುವ ಹೇಳಿಕೆ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಈ ವಿಷಯದಲ್ಲಿ ತಮಗೆ ಯಾರು ಶಿಫಾರಸು ಬೇಕಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಸ್ವಾಮೀಜಿಗಳು ಅಭಿಮಾನಪೂರ್ವಕವಾಗಿ ಮಾತನಾಡಿದ್ದಾರೆ. ಸ್ವಾಮೀಜಿಗಳ ಆಶೀರ್ವಾದ ಇದ್ದರೆ ಸಾಕು. ಅವರು ಒಳಗಿನಿಂದಲೇ ಹರಸಿದರೆ ಸಾಕು. ನಾನು ಸಿಎಂ ಆಗಲು ಯಾರೂ ಶಿಫಾರಸ್ಸು ಮಾಡುವುದು ಬೇಡ ಎಂದರು.
ನಾನು ಮಾಡಿರುವ ಕೆಲಸವನ್ನು ನೋಡಿ ನಮ್ಮ ಪಕ್ಷದ ಹೈಕಮಾಂಡ್ ಸೂಕ್ತ ತೀರ್ಮಾನ ಮಾಡುತ್ತದೆ.
ಎಲ್ಲಾ ಸ್ವಾಮೀಜಿಗಳಿಗೂ ಕೈ ಮುಗಿಯುತ್ತೇನೆ, ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಲು ಹೋಗಬೇಡಿ” ಎಂದು ಹೇಳಿದರು
ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆ, ರಾಜ್ಯದ ಅಭಿವೃದ್ಧಿ, ಬಾಕಿ ಇರುವ ಯೋಜನೆಗಳು, ಅನುದಾನದಲ್ಲಿ ನ್ಯಾಯ ಒದಗಿಸುವ, ರಾಜ್ಯದ ಬೇಡಿಕೆಗಳ ವಿಚಾರವಾಗಿ ರಾಜ್ಯದಿಂದ ಆಯ್ಕೆಯಾಗಿರುವ ಎಲ್ಲಾ ಸಂಸದರು ಹಾಗೂ ಸಚಿವರ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಎರಡು ಗಂಟೆಗಳ ಕಾಲ ನಮ್ಮ ಚರ್ಚೆಯಲ್ಲಿ ಭಾಗವಹಿಸಿದ್ದರು. ನಂತರ ಎಲ್ಲರು ಒಟ್ಟಿಗೆ ಊಟ ಮಾಡಿದೆವು” ಎಂದರು.
ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತೀನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಲಾಯಿತು. ಹೆದ್ದಾರಿ ಕಾಮಗಾರಿಗಳಿಗೆ ಎಲ್ಲೆಲ್ಲಿ ಅಡಚಣೆಯಿದೆ ಆ ಭಾಗದ ಶಾಸಕರ ಜೊತೆ ಮಾತನಾಡಲಾಗುವುದು. ಅನೇಕ ಕಡೆ ದೇವಸ್ಥಾನಗಳಿವೆ. ಅವುಗಳನ್ನು ಮುಟ್ಟಬೇಡಿ ಎಂದು ಹೇಳುತ್ತಾರೆ. ಹೀಗೆ ಅನೇಕ ಸಮಸ್ಯೆಗಳಿವೆ, ಈ ಎಲ್ಲದರ ಬಗ್ಗೆ ಅಧಿಕಾರಿಗಳನ್ನು ಕರೆದು ಮಾತನಾಡಲಾಗುವುದು ಎಂದು ತಿಳಿಸಿದರು.
Previous Articleಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬೀಗ.
Next Article ವಾಲ್ಮೀಕಿ ನಿಗಮ ಹಗರಣ-ಬಗೆದಷ್ಟು ಆಳ.